ರಾಮನಗರದಲ್ಲಿ 73 ನೇ ಸ್ವಾತಂತ್ರ್ಯ ದಿನಾಚರಣೆ : ಕಣ್ಮನ ಸೆಳೆಯುವ ಪೊಲೀಸ್ ಪೆರೇಡ್! - ರಾಮನಗರ ಜಿಲ್ಲಾ ಕ್ರೀಡಾಂಗಣ
ರಾಮನಗರ ಜಿಲ್ಲಾ ಕ್ರೀಡಾಂಗಣದಲ್ಲಿ ಇಂದು 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನ ಅದ್ದೂರಿಯಾಗಿ ಆಚರಣೆ ಮಾಡಲಾಯಿತು. ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ಧ್ವಜಾರೋಹಣ ನೆರವೇರಿಸುವ ಮೂಲಕ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು. ಧ್ವಜಾರೋಹಣದ ಬಳಿಕ ಮಕ್ಕಳಿಂದ ಹಲವಾರು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದರೆ, ಇತ್ತ ಪೊಲೀಸ್ ಸಿಬ್ಬಂದಿಯಿಂದ ಕಣ್ಮನ ಸೆಳೆಯುವ ಪೆರೇಡ್ ನಡೆಯಿತು.