ಮಹಿಳಾ ದಿನಾಚರಣೆ ಪ್ರಯುಕ್ತ ಶಿವಮೊಗ್ಗದಲ್ಲಿ ಮಹಿಳಾ ಸಾಂಸ್ಕೃತಿಕ ಉತ್ಸವ - International Women's Day
ಶಿವಮೊಗ್ಗ: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಮಹಿಳಾ ಸಾಂಸ್ಕೃತಿಕ ಉತ್ಸವ ಹಮ್ಮಿಕೊಳ್ಳಲಾಗಿತ್ತು. ನಗರದ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಧ ಜಾನಪದ ನೃತ್ಯ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಾಯಿತು. ರಂಗೋಲಿ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಸಹ ಆಯೋಜಿಸಲಾಗಿತ್ತು.