ಬೀದರ್ ಪಶು ವಿಶ್ವವಿದ್ಯಾಲಯದಲ್ಲಿ ಅಕ್ರಮ ಆರೋಪ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ - ಬ್ಯಾಕ್ಲಾಗ್ ಹುದ್ದೆ ನೇಮಕಾತಿ ಅಕ್ರಮ ಸುದ್ದಿ
ಕಲಬುರಗಿ: ಬೀದರ್ ಪಶು ವಿಶ್ವವಿದ್ಯಾಲಯದಲ್ಲಿ 32 ಕೋಟಿ 26 ಲಕ್ಷ ರೂಪಾಯಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ವೀರ ಕನ್ನಡಿಗ ಸೇನೆಯ ಕಾರ್ಯಕರ್ತರು ಕಲಬುರಗಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಅಲ್ಲದೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿದ್ದಾರೆ.