ಮಾಜಿ ಡಿಸಿಎಂ ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಮೇಲೆ ಐಟಿ ದಾಳಿ
ತುಮಕೂರು: ಮಾಜಿ ಉಪ ಮುಖ್ಯಮಂತ್ರಿ ಜಿ ಪರಮೇಶ್ವರ್ ಅವರ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಇಂದು ಬೆಳಗ್ಗೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ತುಮಕೂರು ನಗರದಲ್ಲಿರುವ ಮೆಡಿಕಲ್ ಕಾಲೇಜ್ ಮತ್ತು ಇಂಜಿನಿಯರಿಂಗ್ ಕಾಲೇಜಿನ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೂರು ತಂಡಗಳಲ್ಲಿ ಬಂದಿರುವಂತಹ ಐಟಿ ಇಲಾಖೆಯ ಅಧಿಕಾರಿಗಳು ಲೆಕ್ಕಪತ್ರ ವಿಭಾಗದ ಸಿಬ್ಬಂದಿಗಳನ್ನು ವಿಚಾರಣೆಗೊಳಪಡಿಸಿ ದಾಖಲೆಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಪರಿಶೀಲನೆ ನಡೆಸುತ್ತಿದ್ದಾರೆ.
Last Updated : Oct 10, 2019, 11:03 AM IST