ಬೆಳಗಾವಿಯಲ್ಲಿ ಜನಸೇವಕ ಸಮಾವೇಶ: ಕಿಕ್ಕಿರಿದು ಸೇರಿದ ಜನಸಾಗರ - Belgavi
ಬೆಳಗಾವಿಯಲ್ಲಿ ಬಿಜೆಪಿ ಜನಸೇವಕ ಸಮಾವೇಶದ ಸಮಾರೋಪ ಸಮಾರಂಭ ನಡೆಯುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ ಹಲವರು ಭಾಗವಹಿಸಿದ್ದಾರೆ. ಕಾರ್ಯಕ್ರಮ ನಡೆಯುತ್ತಿರುವ ಬೆಳಗಾವಿ ಜಿಲ್ಲಾ ಕ್ರೀಡಾಂಗಣ ಹೌಸ್ ಫುಲ್ ಆಗಿದೆ. ಮೈದಾನದಿಂದ ಸುಮಾರು ಒಂದು ಕಿ.ಮೀ ಉದ್ದಕ್ಕೂ ಜನರು ಕಿಕ್ಕಿರಿದು ಸೇರಿದ್ದಾರೆ.