ಜನತಾ ಕರ್ಫ್ಯೂ ಬೆಂಬಲಿಸಿ ಸಿಲಿಕಾನ್ ಸಿಟಿ ಸ್ತಬ್ಧ: ರಸ್ತೆಗಳು ಖಾಲಿ ಖಾಲಿ - coronavirus updates
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ಸಿಲಿಕಾನ್ ಸಿಟಿಯಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ. ಹೀಗಾಗಿ ಸದಾ ವಾಹನ ದಟ್ಟಣೆಯಿಂದ ಗಿಜಿಗುಡುತ್ತಿದ್ದ ನಗರದ ಪ್ರಮುಖ ರಸ್ತೆಗಳಾದ ಹೆಬ್ಬಾಳ ರಸ್ತೆ, ವಿಮಾನ ನಿಲ್ದಾಣ ರಸ್ತೆ, ಶಿವಾನಂದ ವೃತ್ತ, ಕಾವೇರಿ ವೃತ್ತ ಸೇರಿದಂತೆ ಎಲ್ಲಾ ರಸ್ತೆಗಳು ಖಾಲಿ ಖಾಲಿಯಾಗಿವೆ. ಇನ್ನು ಬಂದ್ ಮಧ್ಯೆ ತುರ್ತು ಸೇವೆಯ ಆ್ಯಂಬುಲೆನ್ಸ್ಗಳು ಓಡಾಟ ನಡೆಸುತ್ತಿದ್ದು, ನಗರದಾದ್ಯಂತ ಹೊಯ್ಸಳ ಪೊಲೀಸರು ಗಸ್ತು ತಿರುಗುತ್ತಿದ್ದಾರೆ.