ನಮ್ಮ ಸಮುದಾಯಕ್ಕೆ ಅಗತ್ಯ ಸೌಲಭ್ಯ ಕಲ್ಪಿಸದಿದ್ದರೆ ಪಾದಯಾತ್ರೆ ಮಾಡುತ್ತೇವೆ: ಜಯ ಮೃತ್ಯುಂಜಯ ಸ್ವಾಮೀಜಿ - ಜಯ ಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಪಂಚಮಸಾಲಿ ಸಮುದಾಯಕ್ಕೆ ರಾಜ್ಯದ 2ಎ ಹಾಗೂ ಕೇಂದ್ರದ ಒಬಿಸಿ ಮೀಸಲಾತಿ ಪ್ರಸ್ತಾವನೆ ಕೊಡದೆ ಹೋದಲ್ಲಿ ಪಾದಯಾತ್ರೆ ಮಾಡಿ ಪ್ರತಿಭಟನೆ ನಡೆಸಲಾಗುವುದೆಂದು ಸಮುದಾಯದ ಮುಖ್ಯರಾದ ಜಯ ಮೃತ್ಯುಂಜಯ ಸ್ವಾಮೀಜಿ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಇಂದು ಸಭೆ ಬಳಿಕ ಮೀಸಲಾತಿ ಕುರಿತು ನಿರ್ಧಾರ ಪ್ರಕಟಿಸುವ ನಿರೀಕ್ಷೆಯಲ್ಲಿದ್ದ ಸ್ವಾಮಿಗಳಿಗೆ ನಿರಾಸೆಯಾಗಿದೆ. ಈ ಬಗ್ಗೆ ನಮ್ಮ ಪ್ರತಿನಿಧಿ ಜೊತೆ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.