ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಸ್ವಾಭಿಮಾನವಿಲ್ಲ: ಬಿ.ವೈ.ರಾಘವೇಂದ್ರ - latest b y raghavendra news
ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರಿಗೆ ಸ್ವಲ್ಪವೂ ಸ್ವಾಭಿಮಾನವಿಲ್ಲ ಎಂದು ಸಂಸದ ಬಿ.ವೈ.ರಾಘವೇಂದ್ರ ಆರೋಪಿಸಿದ್ದಾರೆ. ಹಾವೇರಿ ಜಿಲ್ಲೆಯ ಹಿರೇಕೆರೂರಿನಲ್ಲಿ ಮಾತನಾಡಿದ ಬಿ.ವೈ.ರಾಘವೇಂದ್ರ, ಮೈತ್ರಿಗೆ ತಕ್ಕ ಪಾಠ ಕಲಿಸಿದ್ದಾರೆ. ಇದೀಗ ಮತ್ತೆ ರಾಜ್ಯದಲ್ಲಿ ಸರ್ಕಾರ ರಚಿಸುವ ಇಂಗಿತ ವ್ಯಕ್ತಪಡಿಸುತ್ತಿರುವ ಉಭಯ ಪಕ್ಷಗಳ ನಾಯಕರಿಗೆ ಸ್ವಲ್ಪವೂ ಸ್ವಾಭಿಮಾನವಿಲ್ಲ ಎಂದು ಟೀಕಿಸಿದರು. ಅಲ್ಲದೇ, ಉಭಯ ಪಕ್ಷಗಳ ನಾಯಕರಿಗೆ ಯಾವುದೇ ನೈತಿಕತೆ ಇಲ್ಲ. ಈ ರೀತಿಯ ಹಿಟ್ ಅಂಡ್ ರನ್ ಸ್ಟ್ಯಾಟರ್ಜಿ ಬಿಡಬೇಕೆಂದರು. ಇನ್ನು, 15 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲ್ಲುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.