ಕರ್ನಾಟಕ

karnataka

ETV Bharat / videos

ವೈಯಕ್ತಿಕ ನಿಂದನೆ ಮಾಡುವುದರಲ್ಲೇ ಜನಪ್ರತಿನಿಧಿಗಳು ನಿರತರಾಗಿದ್ದಾರೆ: ಮನದಾಳ ಬಿಚ್ಚಿಟ್ಟ ಹೆಚ್. ವಿಶ್ವನಾಥ್

By

Published : Apr 4, 2019, 5:53 PM IST

ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಜೆಡಿಎಸ್​ ರಾಜ್ಯಾಧ್ಯಕ್ಷ ಹೆಚ್. ವಿಶ್ವನಾಥ್, ಬಿಜೆಪಿಯವರು ಸುಳ್ಳಿನ ಸರಮಾಲೆಯಲ್ಲೇ ಗೆದ್ದಿದ್ದಾರೆ. ಆದರೆ, ಈ ಬಾರಿ ಹೀಗಾಗುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಈಟಿವಿ ಭಾರತ್ ಜೊತೆ ಮಾತನಾಡಿದ ಅವರು ವಿಧಾನಸಭೆ, ಲೋಕಸಭೆ ಸೇರಿದಂತೆ ಬಹಳಷ್ಟು ಚುನಾವಣೆಗಳನ್ನು ನೋಡಿದ್ದೇನೆ. ಆದರೆ, ಈ ಬಾರಿಯ ಸಾರ್ವತ್ರಿಕ ಚುನಾವಣೆ ವ್ಯಕ್ತಿಗತವಾಗಿದೆ. ಈ ದೇಶದ ಅಭಿವೃದ್ಧಿ ಮತ್ತು ಬೆಳವಣಿಗೆ ಕುರಿತು ಯಾರೂ ಚರ್ಚೆ ಮಾಡುತ್ತಿಲ್ಲ. ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರ ಐದು ವರ್ಷಗಳಲ್ಲಿ ಏನು ಮಾಡಿದೆ ಎಂಬುದರ ಬಗ್ಗೆ ಚರ್ಚೆ ಮಾಡಿಲ್ಲ. ಅದರ ಬದಲು ವೈಯಕ್ತಿಕ ನಿಂದನೆ ಮಾಡುವುದರಲ್ಲೇ ಜನಪ್ರತಿನಿಧಿಗಳು ನಿರತರಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ABOUT THE AUTHOR

...view details