ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ಪ್ರತಿಭಟನೆ - ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್
ತುಮಕೂರು: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವಿರೋಧಿಸಿ ಜೆಡಿಎಸ್ ವತಿಯಿಂದ ತುಮಕೂರು ತಾಲೂಕಿನ ಹೆಬ್ಬೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು. ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ. ಗೌರಿಶಂಕರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ನೂರಾರು ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು. ನಂತರ ಕೆಲಕಾಲ ಕುಣಿಗಲ್ ಮತ್ತು ತುಮಕೂರು ನಡುವೆ ರಸ್ತೆತಡೆ ನಡೆಸಿ ಪ್ರತಿಭಟಿಸಿದರು. ಇದರಿಂದ ಕೆಲಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಿತ್ತು. ದೇಶದ ಜನ ಬೆಲೆ ಏರಿಕೆಯಿಂದ ನೊಂದಿದ್ದಾರೆ. ಗ್ಯಾಸ್, ಗೊಬ್ಬರದ ಬೆಲೆ ಏರಿಕೆಯಾಗಿದೆ. ಕೇಂದ್ರ ಸರ್ಕಾರದ ಮೇಲೆ ದೊಡ್ಡ ಕನಸಿಟ್ಟಿದ್ದರು, ಅದನ್ನು ಹುಸಿಯಾಗಿಸಲಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.