ಹಾಲ್ನೊರೆಯಂತೆ ಧುಮ್ಮಿಕ್ಕುತ್ತಿರುವ ಜೋಗದ ಸೌಂದರ್ಯಕ್ಕೆ ಮನಸೋತ ಪ್ರವಾಸಿಗರು
ಮಲೆನಾಡಿನಲ್ಲಿ ವರುಣನ ಅಬ್ಬರ ಜೋರಾಗಿದೆ. ಭಾರಿ ವರ್ಷಧಾರೆಗೆ ವಿಶ್ವವಿಖ್ಯಾತ ಜೋಗ ಜಲಪಾತ ಧುಮ್ಮಿಕ್ಕುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಮಳೆ ಜೊತೆಗೆ ಮಂಜು ಕವಿದ ವಾತಾವರಣದಿಂದ ಜೋಗಕ್ಕೆ ಮತ್ತಷ್ಟು ಮೆರುಗು ಬಂದಿದೆ. ಹಾಲ್ನೊರೆಯಂತೆ ನೀರು ಧುಮ್ಮಿಕ್ಕುವ ದೃಶ್ಯ ನಯನ ಮನೋಹರವಾಗಿದೆ.