ಕೊರೊನಾ ನಿಯಂತ್ರಣಕ್ಕೆ ಸರ್ಕಾರದ ಜೊತೆ ಕೈ ಜೋಡಿಸಿ: ಶಾಸಕ ಎನ್.ಮಹೇಶ್ - ಕೊರೊನಾ ಎರಡನೇ ಅಲೆ
ಕೊಳ್ಳೇಗಾಲ: ಕೊರೊನಾ ಎರಡನೇ ಅಲೆಯ ನಿಯಂತ್ರಣಕ್ಕೆ ಸರ್ಕಾರ ತೆಗೆದುಕೊಂಡಿರುವ 14 ದಿನಗಳ ಕಟ್ಟುನಿಟ್ಟಿನ ಕರ್ಫ್ಯೂ ನಡೆ ಸರಿಯಾಗಿದೆ ಎಂದು ಶಾಸಕ ಎನ್.ಮಹೇಶ್ ಹೇಳಿದರು. ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಎರಡನೇ ಅಲೆಯು ದೇಶದಲ್ಲಿ ಹಾಗೂ ರಾಜ್ಯದಲ್ಲಿ ವಿಚಿತ್ರವಾಗಿ ಹರಡುತ್ತಿದ್ದು ಇದಕ್ಕೆ ಕಡಿವಾಣ ಹಾಕಲು ಸರ್ಕಾರ ಜಾರಿಗೊಳಿಸಿರುವ ಮುಂದಿನ 14 ದಿನಗಳ ಜನತಾ ಕರ್ಫ್ಯೂ ಸ್ವಾಗತಾರ್ಹ. ಏಕೆಂದರೆ ಈ ಕಠಿಣ ರೂಲ್ಸ್ ನಿಂದ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತದೆ ಎಂದಿದ್ದಾರೆ.