ಚಾಮರಾಜನಗರದಲ್ಲಿ ಪರ್ತಕರ್ತರ ಕಾರ್ಯಾಗಾರ - Journalists' Workshop in Chamarajanagar
ಚಾಮರಾಜನಗರ: ಜನಾಭಿಪ್ರಾಯ ರೂಪಿಸುವಲ್ಲಿ ಮಾಧ್ಯಮದ ಪಾತ್ರ ಹಿರಿದಾಗಿದ್ದು, ಅಭಿವೃದ್ಧಿಯತ್ತ ಜನರನ್ನು ಪ್ರೇರೇಪಿಸುವ ಕೆಲಸವನ್ನು ಮಾಧ್ಯಮ ಮಾಡಬೇಕು ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು. ಪಿಐಬಿ, ಮೈವಿವಿಯ ಪತ್ರಿಕೋದ್ಯಮ ವಿಭಾಗ ಹಾಗೂ ಚಾಮರಾಜನಗರ ಜಿಲ್ಲಾಡಳಿತ ಸಂಯುಕ್ತವಾಗಿ ಆಯೋಜಿಸಿದ್ದ ಪತ್ರಕರ್ತರ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಪತ್ರಿಕೋದ್ಯಮ ಪ್ರಾಧ್ಯಾಪಕಿ ಎಂ.ಎಸ್.ಸಪ್ನಾ , ಪಿಐಬಿ ಹೆಚ್ಚುವರಿ ಮಹಾನಿರ್ದೇಶಕ ಎಂ. ನಾಗೇಂದ್ರಸ್ವಾಮಿ ಭಾಗವಹಿಸಿದ್ದರು.