ಕದಂಬೋತ್ಸವದಲ್ಲಿ ಅರ್ಜುನ್ ಜನ್ಯ ಗಾನಸುಧೆ, ಪ್ರೇಕ್ಷಕರಿಗೆ ಮನರಂಜನೆಯ ರಸದೌತಣ
ಕಾರವಾರ: ಕನ್ನಡದ ಮೊದಲ ರಾಜಧಾನಿ ಎಂಬ ಖ್ಯಾತಿಯ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬನವಾಸಿಯಲ್ಲಿ ನಡೆಯುತ್ತಿರುವ ಕದಂಬೋತ್ಸವದ ಮೊದಲ ದಿನದ ಲೇಟ್‌ನೈಟ್ ಸಂಗೀತ ಕಾರ್ಯಕ್ರಮ ಪ್ರೇಕ್ಷಕರ ಗಮನ ಸೆಳೆಯಿತು. ಕಾರ್ಯಕ್ರಮದಲ್ಲಿ ಸ್ಯಾಂಡಲ್‌ವುಡ್‌ನ ಪ್ರಖ್ಯಾತ ಗಾಯಕ ಹಾಗು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಕಂಠಸಿರಿ ನೆರೆದ ಜನರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತು.