ಕೊರೊನಾಗೆ ಕಲಬುರಗಿಯಲ್ಲಿ ಮೊದಲ ಬಲಿ: ಮುಂಜಾಗ್ರತಾ ಕ್ರಮದ ಬಗ್ಗೆ ಡಿಸಿ ಹೇಳಿದ್ದು ಹೀಗೆ - corona death in Kalaburagi
ಕಲಬುರಗಿ: ಕೊರೊನಾದಿಂದ 76 ವರ್ಷದ ವೃದ್ಧ ಸಾವನ್ನಪ್ಪಿದ ಬೆನ್ನಲ್ಲೇ ಕಲಬುರಗಿ ಜಿಲ್ಲಾಡಳಿತ ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ವೃದ್ಧನ ಸಂಬಂಧಿಕರು ಸೇರಿದಂತೆ ಒಟ್ಟು 46 ಜನರನ್ನು ಪ್ರತ್ಯೇಕವಾಗಿ ಚಿಕಿತ್ಸೆಗೆ ಒಳಪಡಿಸಿದ್ದು, ಇದರಲ್ಲಿ 31 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡಲಾಗಿದೆ. ನಾಲ್ವರಲ್ಲಿ ಕೊರೊನಾ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಅವರ ಗಂಟಲ ದ್ರವವನ್ನು ಲ್ಯಾಬ್ ಪರೀಕ್ಷೆಗಾಗಿ ಬೆಂಗಳೂರಿಗೆ ಕಳಿಸಲಾಗಿದೆ. ಇಂದಿನಿಂದ ಒಂದು ವಾರಗಳ ಕಾಲ ಪರೀಕ್ಷೆ ಇರುವ ಶಾಲಾ-ಕಾಲೇಜು ಹೊರತುಪಡಿಸಿ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇಂದಿನಿಂದ ಮುಂದಿನ ಆದೇಶದವರೆಗೆ ಜಿಲ್ಲೆಯ ಎಲ್ಲಾ ಸಿನಿಮಾ ಹಾಲ್ ಹಾಗೂ ಮಾಲ್ಗಳನ್ನು ಬಂದ್ ಮಾಡಲು ಸೂಚಿಸಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಶರತ್ ಈಟಿವಿ ಭಾರತಕ್ಕೆ ತಿಳಿಸಿದ್ದಾರೆ. ಅವರೊಂದಿಗೆಗೆ ನಮ್ಮ ಪ್ರತಿನಿಧಿ ನಡೆಸಿರುವ ಚಿಟ್ ಚಾಟ್ ಇಲ್ಲಿದೆ.