ಕೊರೊನಾ ನೆಪ: ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ಭರ್ತಿಗೆ ತಡೆ ಆರೋಪ - ಹೈದ್ರಾಬಾದ್ ಕರ್ನಾಟಕ
ಕಲಬುರಗಿ: ಹಿಂದುಳಿದ ಪ್ರದೇಶ ಹೈದರಾಬಾದ್ ಕರ್ನಾಟಕವನ್ನು ಸಮಗ್ರ ಅಭಿವೃದ್ಧಿ ಮಾಡುವುದಾಗಿ ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಕಲ್ಯಾಣ ಕರ್ನಾಟಕ ಎಂದು ಮರು ನಾಮಕರಣ ಮಾಡಿದೆ. ಅಲ್ಲದೆ ಈ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಆದರೀಗ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿ ಸರ್ಕಾರವೇ ಮಲತಾಯಿ ಧೋರಣೆ ತೋರುತ್ತಿದೆ. ಕೊರೊನಾ ಸಂಕಷ್ಟದಿಂದ ಆರ್ಥಿಕ ಸಮಸ್ಯೆ ನೆಪವೊಡ್ಡಿ, ಕಲ್ಯಾಣ ಕರ್ನಾಟಕ ಭಾಗದ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರ ತಡೆ ಹಿಡಿದಿದೆ ಎನ್ನುವ ಆರೋಪ ಕೇಳಿ ಬಂದಿದೆ.