ಬೀದರ್ನಲ್ಲಿ ಕಲ್ಯಾಣ ಕರ್ನಾಟಕ ದಿನಾಚರಣೆ: ಜಿಲ್ಲಾಧಿಕಾರಿಯಿಂದ ಧ್ವಜಾರೋಹಣ - ಬೀದರ್ ಲೆಟೆಸ್ಟ್ ನ್ಯೂಸ್
ಬೀದರ್: ಕಲ್ಯಾಣ ಕರ್ನಾಟಕ ದಿನಾಚರಣೆ ನಿಮಿತ್ತ ಜಿಲ್ಲಾಧಿಕಾರಿ ರಾಮಚಂದ್ರನ್ ಆರ್. ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಜಿಲ್ಲಾ ಮೀಸಲು ಪೊಲೀಸ್ ಪಡೆ, ವಿವಿಧ ತುಕಡಿಗಳಿಂದ ಪಥಸಂಚಲನ ನಡೆಯಿತು. ಶಾಸಕ ಬಂಡೆಪ್ಪ ಕಾಶೆಂಪೂರ್, ರಹಿಂಖಾನ್, ಪರಿಷತ್ ಸದಸ್ಯರಾದ ವಿಜಯಸಿಂಗ್, ಜಿ.ಪಂ ಅಧ್ಯಕ್ಷೆ ಗೀತಾ ಚಿದ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾಗೇಶ್ ಡಿ.ಎಲ್. ಹಾಗೂ ಜಿ.ಪಂ ಸಿಇಒ ಗ್ಯಾನೇಂದ್ರಕುಮಾರ್ ಗಂಗ್ವಾರ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.