ಕಂಪ್ಲಿಯನ್ನು ವಿಜಯನಗರ ಜಿಲ್ಲೆಗೆ ಸೇರಿಸಬೇಕು: ಶಾಸಕ ಜೆ.ಎನ್.ಗಣೇಶ್ ಆಗ್ರಹ - ಕಂಪ್ಲಿಯನ್ನು ವಿಜಯನಗರಕ್ಕೆ ಸೇರಿಸಲು ಶಾಸಕ ಗಣೇಶ್ ಆಗ್ರಹ
ಹೊಸಪೇಟೆ: ವಿಜಯನಗರ ಜಿಲ್ಲೆ ರಚನೆಗೆ ಸ್ವಾಗತ. ಆದರೆ ಕಂಪ್ಲಿ ತಾಲೂಕನ್ನು ವಿಜಯನಗರ ಜಿಲ್ಲೆಗೆ ಸೇರ್ಪಡೆಗೊಳಿಸಬೇಕು ಎಂದು ಕಂಪ್ಲಿ ಶಾಸಕ ಜೆ.ಎನ್.ಗಣೇಶ್ ಆಗ್ರಹಿಸಿದ್ದಾರೆ. ಕಂಪ್ಲಿಯಲ್ಲಿ ಮಾತನಾಡಿದ ಅವರು, ಅರಣ್ಯ ಸಚಿವ ಆನಂದ್ ಸಿಂಗ್ ಕರೆ ಮಾಡಿ ಜಿಲ್ಲೆ ಘೋಷಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ವಿಜಯನಗರ ಜಿಲ್ಲೆಗೆ ಕಂಪ್ಲಿ ಸೇರಿಸುವಂತೆ ಪ್ರಸ್ತಾವನೆ ಸಲ್ಲಿಸಲು ತಿಳಿಸಿದ್ದಾರೆ. ಕಂಪ್ಲಿಯನ್ನು ವಿಜಯನಗರ ಜಿಲ್ಲೆಗೆ ಸೇರಿಸದಿದ್ದರೆ ಹೋರಾಟ ಮಾಡಲಾಗುವುದು ಎಂದರು.