ಕನ್ನಡಕ್ಕೆ ಕವಿರಾಜ ಮಾರ್ಗ ಕೊಟ್ಟ ಕಲಬುರ್ಗಿ ಜಿಲ್ಲೆಯಲ್ಲೂ ಸರಳ ರಾಜ್ಯೋತ್ಸವ!!
ಕಲಬುರಗಿ ನಗರದ ನಗರೇಶ್ವರ ಶಾಲೆ ಆವರಣದಲ್ಲಿ ಆಯೋಜಿಸಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿ ವಿ ಜ್ಯೋತ್ಸ್ನಾ, ತಾಯಿ ಭುವನೇಶ್ವರಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕನ್ನಡದ ಮೊಟ್ಟಮೊದಲ ಉಪಲಬ್ಧ ಗ್ರಂಥ ಕವಿರಾಜ ಮಾರ್ಗ ಕಾಣಿಕೆ ನೀಡಿದ ನೆಲ ಕಲಬುರಗಿ ಜಿಲ್ಲೆ ಆಗಿರೋದು ನಮ್ಮೆಲ್ಲರ ಹೆಮ್ಮೆ ಎಂದರು. ಕಾರ್ಯಕ್ರಮದಲ್ಲಿ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ, ಶಾಸಕರಾದ ಖನೀಸ್ ಫಾತಿಮಾ ಬೇಗಂ, ಬಸವರಾಜ ಮತ್ತಿಮೋಡ, ವಿಧಾನ ಪರಿಷತ್ ಸದಸ್ಯ ಬಿ ಜಿ ಪಾಟೀಲ್ ಮತ್ತಿತರರು ಉಪಸ್ಥಿತಿತರಿದ್ದರು. ಕೋವಿಡ್ ಹಿನ್ನೆಲೆ ಈ ಬಾರಿ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಯಿತು.