ಕೋಟೆನಾಡಲ್ಲಿ ಅದ್ಧೂರಿಯಾಗಿ ನಡೆಯಿತು ಕನ್ನಡದ ಹಬ್ಬ - Kannada Rajyosthava Celebration at Chitradurga
ಚಿತ್ರದುರ್ಗ: ಜಿಲ್ಲೆಯಲ್ಲಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಯಿತು. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಜಿಲ್ಲಾಧಿಕಾರಿ ವಿನೂತ್ ಪ್ರಿಯಾ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ನೀಲಕಂಠ ದೇವಸ್ಥಾನದಿಂದ ಭುವನೇಶ್ವರಿ ದೇವಿಯ ಭಾವ ಚಿತ್ರ ಮತ್ತು ವಿವಿಧ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು. ಸಾವಿರಾರು ವಿದ್ಯಾರ್ಥಿಗಳು ವಿವಿಧ ವೇಷಗಳನ್ನು ಧರಿಸಿ ಗಮನ ಸೆಳೆದರು.