ವಿದೇಶದಿಂದ ಬರುವವರು ಸ್ವಂತ ಖರ್ಚಿನಲ್ಲಿ ಕ್ವಾರಂಟೈನ್.. ಬಿಬಿಎಂಪಿ ಆಯುಕ್ತರ ಸ್ಪಷ್ಟನೆ
ಇಂದು ರಾತ್ರಿ ಒಂದು ವಿಮಾನದ ಮೂಲಕ ವಿದೇಶದಲ್ಲಿರುವ ಭಾರತೀಯರು ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ಅವರನ್ನು 14 ದಿನಗಳ ಕ್ವಾರಂಟೈನ್ ಮಾಡಲು ಈಗಾಗಲೇ ಹೋಟೆಲ್ಗಳನ್ನು ನಿಗದಿ ಮಾಡಲಾಗಿದೆ. ವಿದೇಶದಿಂದ ಬರುವ ಕನ್ನಡಿಗರು ಅವರ ಕ್ವಾರಂಟೈನ್ ವೆಚ್ಚವನ್ನು ಅವರೇ ಭರಿಸಬೇಕಾಗಿದೆ ಎಂದು ಬಿಬಿಎಂಪಿ ಆಯುಕ್ತ ಅನಿಲ್‌ಕುಮಾರ್ ತಿಳಿಸಿದ್ದಾರೆ. ಅಲ್ಲದೇ ಅವರಿಗೆ ಥರ್ಮಲ್ ಸ್ಕ್ರೀನಿಂಗ್ ಹಾಗೂ ಆರೋಗ್ಯ ತಪಾಸಣೆ ಮಾಡುವ ಸಲುವಾಗಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ವೈದ್ಯರ ತಂಡ ಕಳಿಸಲಾಗುತ್ತಿದೆ. ವಿದೇಶದಿಂದ ಬರುತ್ತಿರುವರನ್ನು ಕ್ವಾರಂಟೈನ್ ಮಾಡುವ ಕೆಲಸವನ್ನು ಬಿಬಿಎಂಪಿ, ಆರೋಗ್ಯ ಹಾಗೂ ಪೊಲೀಸ್ ಇಲಾಖೆಗಳ ಸಹಯೋಗದೊಂದಿಗೆ ಮಾಡುತ್ತಿದೆ ಎಂದು ಬಿಬಿಎಂಪಿ ಆಯುಕ್ತರು ಹೇಳಿದ್ದಾರೆ.