ಕೊರೊನಾ ಕರ್ಫ್ಯೂಗೆ ಕಾರವಾರ ಜನತೆಯಿಂದ ಉತ್ತಮ ಬೆಂಬಲ - ಕಾರವಾರ ಲೇಟೆಸ್ಟ್ ನ್ಯೂಸ್
ಕಾರವಾರ: ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೊಳಿಸಿರುವ 14 ದಿನದ ಕಠಿಣ ಕೊರೊನಾ ಕರ್ಫ್ಯೂಗೆ ಕಾರವಾರದಲ್ಲಿಯೂ ಉತ್ತಮ ಬೆಂಬಲ ವ್ಯಕ್ತವಾಗಿದೆ. ಬೆಳಗ್ಗೆ 10 ಗಂಟೆಯ ಬಳಿಕ ಮಾರುಕಟ್ಟೆಗಳನ್ನು ಪೊಲೀಸರು ಹಾಗೂ ಅಧಿಕಾರಿಗಳು ಬಂದ್ ಮಾಡಿಸಿದ್ದು, ರಸ್ತೆಗಳಲ್ಲಿ ವಾಹನ ಸಂಚಾರ ಕಡಿಮೆಯಾಗಿದೆ. ಪೊಲೀಸರು ಅನಗತ್ಯವಾಗಿ ಓಡಾಡುವವರ ಮೇಲೆ ಹದ್ದಿನ ಕಣ್ಣಿಟ್ಟಿದ್ದಾರೆ. ಈ ಕುರಿತು ನಮ್ಮ ಪ್ರತಿನಿಧಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.