'ಮರಾಠ ಅಭಿವೃದ್ಧಿ ಪ್ರಾಧಿಕಾರ ನಿರ್ಧಾರ ಹಿಂಪಡೆಯುವವರೆಗೂ ಪ್ರತಿಭಟನೆ ನಿಲ್ಲುವುದಿಲ್ಲ' - ಕರ್ನಾಟಕ ಬಂದ್ ನ್ಯೂಸ್
ಬೆಂಗಳೂರು: ಸಿಎಂ ಗೃಹ ಕಚೇರಿ ಕೃಷ್ಣಾಗೆ ಮುತ್ತಿಗೆ ಹಾಕಲು ಯೋಜಿಸಿರುವ ಕನ್ನಡ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ನೇತೃತ್ವದ ಪ್ರತಿಭಟನಾಕಾರರನ್ನು ಮೌರ್ಯ ಸರ್ಕಲ್ ಬಳಿಯೇ ಪೊಲೀಸರು ತಡೆಯುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಮಾತನಾಡಿದ ಟಿ.ಎ.ನಾರಾಯಣಗೌಡ, ಇಂದು ರಾಜ್ಯದ ಪ್ರತೀ ತಾಲೂಕು, ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ರಾಜ್ಯ ಸರ್ಕಾರ ಮರಾಠ ಪ್ರಾಧಿಕಾರ ನಿರ್ಧಾರವನ್ನು ವಾಪಸ್ ಪಡೆಯಬೇಕು. ಇದು ಒಂದು ದಿನಕ್ಕೆ ಮುಗಿಯುವ ಪ್ರತಿಭಟನೆ ಅಲ್ಲ. ರಾಜ್ಯ ಸರ್ಕಾರ ಪೊಲೀಸ್ ಇಲಾಖೆಯನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ. ಸರ್ಕಾರ ತನ್ನನ್ನು ಯಾರೂ ಪ್ರಶ್ನೆ ಮಾಡಬಾರದು ಎನ್ನುವ ರೀತಿ ವರ್ತಿಸುತ್ತಿದೆ ಎಂದು ಆಕ್ರೋಶ ಹೊರಹಾಕಿದರು.