ಕರ್ನಾಟಕ ಬಂದ್: ಕೊಪ್ಪಳದಲ್ಲಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ - ಎಪಿಎಂಸಿ ಕಾಯ್ದೆ ತಿದ್ದುಪಡಿ ಸುದ್ದಿ
ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲಾಗಿರುವ ಎಪಿಎಂಸಿ ಕಾಯ್ದೆ ಸೇರಿದಂತೆ ಇನ್ನಿತರೆ ಕಾಯ್ದೆಗಳನ್ನು ವಾಪಸ್ ಪಡೆಯುವಂತೆ ಆಗ್ರಹಿಸಿ ಇಂದು ಕರೆ ನೀಡಲಾಗಿರುವ ಬಂದ್ಗೆ ಕೊಪ್ಪಳ ಜಿಲ್ಲೆಯಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ರೈತ ಸಂಘಟನೆ ಹಾಗೂ ಇನ್ನಿತರ ಹಲವಾರು ಸಂಘಟನೆಗಳ ಕಾರ್ಯಕರ್ತರು ನಗರದಲ್ಲಿ ಸಂಚರಿಸಿ ಪ್ರತಿಭಟನೆ ನಡೆಸುತ್ತಾ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.