ಕರ್ನಾಟಕ ಬಂದ್ಗೆ ದಕ್ಷಿಣ ಕನ್ನಡದಲ್ಲಿ ನೀರಸ ಪ್ರತಿಕ್ರಿಯೆ: ಎಂದಿನಂತೆ ಸಾಗಿದ ಜನಜೀವನ - ಮಂಗಳೂರಿನಲ್ಲಿ ಬಂದ್ಗೆ ಸಿಗದ ಬೆಂಬಲ
ಮಂಗಳೂರು: ರೈತ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ಗೆ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಾಗಲೇ ಜಿಲ್ಲೆಯ ಪ್ರಮುಖ ಸಾರಿಗೆ ಸೇವೆಯಾದ ಖಾಸಗಿ ಬಸ್ ಮಾಲೀಕರು-ಚಾಲಕರು ಬಂದ್ಗೆ ಬೆಂಬಲ ನೀಡುವುದಿಲ್ಲ ಎಂದು ತಿಳಿಸಿದ್ದಾರೆ. ಹೀಗಾಗಿ ಇಂದು ಸರ್ಕಾರಿ-ಖಾಸಗಿ ಬಸ್ಗಳ ಸಂಚಾರ ಎಂದಿನಂತೆ ಸಾಗಿದೆ. ಮಂಗಳೂರು ನಗರದಲ್ಲಿ ಅಂಗಡಿ ಮುಂಗಟ್ಟುಗಳು ಎಂದಿನಂತೆ ತೆರೆದಿವೆ. ಜಿಲ್ಲೆಯಾದ್ಯಂತ ಮುನ್ನೆಚ್ಚರಿಕ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.
Last Updated : Sep 28, 2020, 12:19 PM IST