ಲಾಕ್‌ಡೌನ್‌ನಿಂದ ಮಕ್ಕಳ ಹಕ್ಕುಗಳ ಉಲ್ಲಂಘನೆ ಸಾಧ್ಯತೆ... ರಕ್ಷಣೆಗೆ ನಿಲ್ಲಬೇಕಾದ ಆಯೋಗ ತೆರೆಯುತ್ತಾ ಕಣ್ಣು? - ಬೆಂಗಳೂರಿನ ಕಚೇರಿಗೆ ಬಾರದ ಅಧಿಕಾರಿಗಳು
ಕೋವಿಡ್-19 ನಿಂದಾಗಿ ಸಾಮಾನ್ಯ ಜನರು, ಕೂಲಿ ಕಾರ್ಮಿಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಮಕ್ಕಳ ಹಸಿವು, ದೌರ್ಜನ್ಯ ಸೇರಿದಂತೆ ಮತ್ತಿತರ ಸಂಕಷ್ಟಗಳಿಗೆ ಕಾರಣವಾಗಿದೆ. ವಿಶ್ವಸಂಸ್ಥೆಯೂ ಕೂಡ ಕಳವಳ ವ್ಯಕ್ತಪಡಿಸಿದೆ. ಆದ್ರೆ ಕರ್ನಾಟಕದಲ್ಲಿ ಮಕ್ಕಳ ಹಕ್ಕುಗಳ ಆಯೋಗದ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿಬಂದಿದೆ. ಕೊರೊನಾ ತುರ್ತು ಸಂದರ್ಭದಲ್ಲಿ ಮಕ್ಕಳ ರಕ್ಷಣೆಗೆ ನಿಲ್ಲಬೇಕಾಗಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧಿಕಾರಿಗಳು ಕಚೇರಿಗೆ ಬರ್ತಿಲ್ಲ ಎಂದು ಮಕ್ಕಳ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರು ಆರೋಪಿಸಿದ್ದಾರೆ.