ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕರವೇ ಮಹಿಳಾ ಘಟಕದಿಂದ ಪ್ರತಿಭಟನೆ
ಬೆಂಗಳೂರು: ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಏರಿಸಿರುವುದನ್ನು ಖಂಡಿಸಿ ಕರವೇ ಮಹಿಳಾ ಘಟಕದ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ದಿನನಿತ್ಯ ಬಳಸುವ ಎಣ್ಣೆ, ಕಾಳುಗಳ ತೆರಿಗೆ ಹೆಚ್ಚಿಸಿದ್ದರಿಂದ ಜನಸಾಮಾನ್ಯರ ಬದುಕಿಗೆ ಮಾರಕವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಇರಿಸಿ ಅಡುಗೆ ಮಾಡಿ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ಮೋದಿ ವಿರುದ್ಧ ಧಿಕ್ಕಾರ ಕೂಗಿದರು.