ರಾಜ್ಯದ ಇತಿಹಾಸ ಪಠ್ಯ ಪುಸ್ತಕಗಳ ಕನ್ನಡೀಕರಣ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ - ರಾಜ್ಯ ಇತಿಹಾಸ
ಚಿತ್ರದುರ್ಗ: ರಾಜ್ಯ ಇತಿಹಾಸವನ್ನು ಪಠ್ಯ ಪುಸ್ತಕಗಳ ಕನ್ನಡೀಕರಣಕ್ಕೆ ಸರ್ಕಾರ ಮುಂದಾಗಬೇಕೆಂದು ಒತ್ತಾಯಿಸಿ, ಕರ್ನಾಟಕ ನವ ನಿರ್ಮಾಣ ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಪ್ರವಾಸಿ ಮಂದಿರದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ಡಿಸಿ ವೃತ್ತಕ್ಕೆ ತಲುಪಿ ಬಳಿಕ ಜಿಲ್ಲಾಧಿಕಾರಿ ಕಚೇರಿ ತಲುಪುವ ಮೂಲಕ ಅಪರ ಜಿಲ್ಲಾಧಿಕಾರಿ ಸಂಗಪ್ಪನವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.