ಕಳಪೆ ಗುಣಮಟ್ಟದ ಕಾಮಗಾರಿ ವಿರೋಧಿಸಿ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ.... - ಗದಗ ಸುದ್ದಿ
ರಾಷ್ಟ್ರೀಯ ಹೆದ್ದಾರಿ ವಿಭಾಗದಿಂದ ನಿರ್ಮಿಸಿರುವ ರಸ್ತೆ ಸಂಪೂರ್ಣ ಕಳಪೆಯಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದ ಹೊರವಲಯದಲ್ಲಿ ಪ್ರತಿಭಟನೆ ಮಾಡಲಾಯಿತು. ಲಕ್ಷ್ಮೇಶ್ವರದಿಂದ ದೊಡ್ಡೂರ ಹೋಗುವ ಮಾರ್ಗ ಮಧ್ಯ ಕಾಮಗಾರಿಯಾಗಿದೆ. ಆದ್ರೆ ಕಾಮಗಾರಿಯನ್ನು ಗುತ್ತಿಗೆದಾರರು ಸಂಪೂರ್ಣವಾಗಿ ಕಳಪೆ ಗುಣಮಟ್ಟದ ಸಾಮಾಗ್ರಿಗಳನ್ನು ಬಳಸಿ ಗೊಲ್ಮಾಲ್ ಮಾಡಿದ್ದಾರೆ ಎಂದು ಕರವೇ ಕಾರ್ಯಕರ್ತರು ಆರೋಪಿಸಿದ್ದಾರೆ.