ಪ್ರತಿಭಟನೆಗೆ ಮುಂದಾಗಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡ ರವಿಕೃಷ್ಣಾ ರೆಡ್ಡಿ-ಬೆಂಬಲಿಗರ ಬಂಧನ - Ravi Krishna Reddy arrest
ತುಮಕೂರು: 112 ಹೊಯ್ಸಳ ಪಡೆ ಪೊಲೀಸ್ ಸಿಬ್ಬಂದಿ ಮದ್ಯ ಸೇವನೆ ಮಾಡಿ ಕರ್ತವ್ಯದಲ್ಲಿ ಹಾಜರಾಗಿದ್ದರು ಎಂಬ ಆರೋಪದ ಹಿನ್ನೆಲೆ ಪೊಲೀಸರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾಗಿದ್ದ ಕರ್ನಾಟಕ ರಾಷ್ಟ್ರ ಸಮಿತಿ ಮುಖಂಡ ರವಿಕೃಷ್ಣಾ ರೆಡ್ಡಿ ಅವರನ್ನು ಕುಣಿಗಲ್ ಪೊಲೀಸರು ಬಂಧಿಸಿದರು. ಕುಣಿಗಲ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ಸಜ್ಜಾಗಿದ್ದ ರವಿಕೃಷ್ಣಾ ರೆಡ್ಡಿ ಹಾಗೂ ಅವರ ಬೆಂಬಲಿಗರನ್ನು ವಶಕ್ಕೆ ಪಡೆದ ಪೊಲೀಸರು, ಪ್ರತಿಭಟನೆ ನಡೆಸದಂತೆ ಎಚ್ಚರಿಸಿದರು. ಈ ನಡುವೆ ರವಿಕೃಷ್ಣಾ ರೆಡ್ಡಿ ಹಾಗೂ ಪೊಲೀಸ್ ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ನಂತರ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
Last Updated : Dec 23, 2020, 5:42 PM IST