ಕಾರ್ತಿಕ ಮಾಸ: ಹುಲಿಗೆಮ್ಮ ದೇವಾಲಯದಲ್ಲಿ ಅದ್ಧೂರಿ ದೀಪೋತ್ಸವ - Karthika Masa
ಕಾರ್ತಿಕ ಮಾಸದ ಅಮವಾಸ್ಯೆ ಹಿನ್ನೆಲೆಯಲ್ಲಿ ಕೊಪ್ಪಳ ತಾಲೂಕಿನ ಹುಲಗಿ ಗ್ರಾಮದ ಐತಿಹಾಸಿಕ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೀಪ ಹಚ್ಚುವ ಮೂಲಕ ತಮ್ಮ ಭಕ್ತಿ ಸಮರ್ಪಿಸಿದರು. ಇಂದು ಮಂಗಳವಾರವೂ ಆಗಿರುವುದರಿಂದ ಎಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದು ಪುನೀತರಾದರು.