ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಭಾರಿ ಪೈಪೋಟಿ.. ಯಾರಾಗ್ತಾರೆ ನೂತನ ಸಾರಥಿ? - ಉತ್ತರಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನ
ಭಾರತೀಯ ಜನತಾ ಪಕ್ಷದ ಭದ್ರ ನೆಲೆಯಾಗಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ಪಕ್ಷದ ನೂತನ ಸಾರಥಿಗಾಗಿ ಹುಡುಕಾಟ ಶುರುವಾಗಿದೆ. ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಈಗಾಗಲೇ ನಾಲ್ಕೈದು ಹೆಸರುಗಳು ಚಾಲ್ತಿಯಲ್ಲಿದ್ದು, ಡಿಸೆಂಬರ್ ಅಂತ್ಯದೊಳಗೆ ಹೊಸ ಅಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಅಂತ ಹೇಳಲಾಗ್ತಿದೆ.