ಕಸಾಪ ಚುನಾವಣೆ; ಅಧ್ಯಕ್ಷರಾದರೆ ಸಾಹಿತ್ಯ ಚಟುವಟಿಕೆಗಳಿಗೆ ಉತ್ತೇಜನ.. ಮಾಲಿಪಾಟೀಲ್ ಭರವಸೆ - ಕಸಾಪ ಚುನಾವಣೆ2021
ಶಿವಮೊಗ್ಗ: ಮೇ 9 ರಂದು ನಡೆಯುವ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ನನಗೆ ಮತ ನೀಡಿ ಗೆಲ್ಲಿಸಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯ ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಶೇಖರಗೌಡ ಮಾಲಿಪಾಟೀಲ್ ಮತದಾರರಲ್ಲಿ ಮನವಿ ಮಾಡಿದ್ದಾರೆ. ಅಲ್ಲದೆ, ಈ ಬಾರಿಯ ಚುನಾವಣೆಯಲ್ಲಿ ಸಾಹಿತ್ಯ ಪರಿಷತ್ತಿನ ಅಧ್ಯಕ್ಷನಾಗಿ ಆಯ್ಕೆಯಾದರೆ, ಪ್ರತಿ ತಾಲೂಕು ಕೇಂದ್ರಗಳಲ್ಲಿ ಕನ್ನಡ ಸಾಹಿತ್ಯ ಭವನ ನಿರ್ಮಾಣ, ಕನ್ನಡ ಮಾದರಿ ಶಾಲೆಗಳ ಸ್ಥಾಪನೆ, ರಾಜ್ಯದ ಉದಯೋನ್ಮುಖ ಹಾಗೂ ಯುವ ಬರಹಗಾರರಿಗೆ ಶಿಬಿರಗಳ ಆಯೋಜನೆ, ಪ್ರತಿವರ್ಷ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಲ್ಲಿ ಸಾಹಿತ್ಯ ಸಾಂಸ್ಕೃತಿಕ ಸಮಾವೇಶ ಆಯೋಜನೆ, ಕನ್ನಡದ ಮೌಲಿಕ ಗ್ರಂಥಗಳ ಮರುಮುದ್ರಣ ಹಾಗೂ ಪುಸ್ತಕ ಮಾರಾಟ ಸಂತೆ ಕಾರ್ಯಕ್ರಮದ ಮೂಲಕ ಆನ್ಲೈನ್ ಪುಸ್ತಕ ಮಾರಾಟಕ್ಕೆ ಉತ್ತೇಜನ ಸೇರಿದಂತೆ ಕನ್ನಡ ಸಾಹಿತ್ಯ ಪರಿಷತ್ತಿನ ಅಭಿವೃದ್ಧಿಗೆ ಶ್ರಮಿಸುವ ಕಾಯಕವನ್ನು ಮಾಡುತ್ತೇನೆ. ಹಾಗಾಗಿ ಮೇ 9 ರಂದು ನಡೆಯುವ ಚುನಾವಣೆಯಲ್ಲಿ ಅತ್ಯಧಿಕ ಮತಗಳನ್ನು ನೀಡುವ ಮೂಲಕ ಗೆಲ್ಲಿಸುವಂತೆ ವಿನಂತಿಸಿಕೊಂಡಿದ್ದಾರೆ.