ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ಭೀತಿ... ಜನರ ಆತಂಕಕ್ಕೆ ಡಿಹೆಚ್ಓ ಹೇಳಿದ್ದೇನು? - ಜಿಲ್ಲಾ ಡಿ ಹೆಚ್ ಓ ಪ್ರಭು
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆಯ ಭೀತಿ ಎದುರಾಗಿದೆ. ಕೊಪ್ಪ ತಾಲೂಕಿನ ಜಯಪುರ, ಶಾಂತಿ ಗ್ರಾಮದಲ್ಲಿ ಈ ವೈರಸ್ ಪತ್ತೆಯಾಗಿದೆ. ಈ ಕೆಎಫ್ಡಿ ವೈರಸ್ಅನ್ನು ಶಿವಮೊಗ್ಗ ಜಿಲ್ಲೆಯ ಪ್ರಯೋಗಾಲಯದಲ್ಲಿ ಪತ್ತೆ ಹಚ್ಚಲಾಗಿದ್ದು, ಈ ಕುರಿತಾಗಿ ಜಿಲ್ಲಾ ಆರೋಗ್ಯ ಇಲಾಖೆಯ ವತಿಯಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಈಗಾಗಲೇ ಜಿಲ್ಲೆಯ ಎಲ್ಲಾ ತಾಲೂಕಿನ ಜನರಲ್ಲಿ ಜಾಗೃತಿಯನ್ನು ಮೂಡಿಸಲಾಗುತ್ತಿದ್ದು, ಚಿಕ್ಕಮಗಳೂರು ಜಿಲ್ಲಾ ಆರೋಗ್ಯಾಧಿಕಾರಿ ಪ್ರಭು ಈಟಿವಿ ಭಾರತನೊಂದಿಗೆ ಕೆಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ.