ರಾಜ್ಯ - ರಾಷ್ಟ್ರದಲ್ಲಿ ಬಿಜೆಪಿ ಮುಳಗಲಿದೆ:ಕೆ.ಎಚ್ ಮುನಿಯಪ್ಪ
ಬೆಳಗಾವಿ:ರಾಜ್ಯ ಮತ್ತು ರಾಷ್ಟ್ರದಲ್ಲಿ ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಮುಳುಗುವುದು ಖಚಿತ ಎಂದು ಬಿಜೆಪಿ ನಾಯಕರಿಗೆ ಮಾಜಿ ಕೇಂದ್ರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಮುಳಗುತ್ತಿರುವ ಹಡಗು ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಮುನಿಯಪ್ಪ, ಎಲ್ಲರಿಗೂ ಸೂಚನೆ ಸಿಕ್ಕಿದೆ. ಕರ್ನಾಟಕದಲ್ಲಿ ಬಿಜೆಪಿ ಮುಳಗುವುದು ಖಚಿತ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆ ಮಾಡುತ್ತೇವೆ. ಅದೇ ರೀತಿ ರಾಷ್ಟ್ರದಲ್ಲಿಯೂ ಬಿಜೆಪಿ ಮುಳಗಲಿದೆ. ಜಿಲ್ಲೆಯಲ್ಲಿ ಸತೀಶ್ ಜಾರಕಿಹೊಳಿ ಎಲ್ಲ ಸಮಾಜಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು 30 ವರ್ಷಗಳ ರಾಜಕೀಯ ಇತಿಹಾಸವನ್ನು ಇಲ್ಲಿ ಸ್ಥಾಪಿಸಿದ್ದಾರೆ. ವಿಶೇಷವಾಗಿ ಎಲ್ಲ ವರ್ಗದ ಜನತೆ ಜೊತೆಗೆ ಸತೀಶ ಜಾರಕೊಹೊಳಿ ಇದ್ದಾರೆ. ಬಹುತೇಕ ಲಿಂಗಾಯತ, ಮರಾಠಾ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಸತೀಶ ಜಾರಕಿಹೊಳಿ ಬೆಂಬಲಿಸಲಿದ್ದಾರೆ. ಹೀಗಾಗಿ ಈ ಬಾರಿ ಅವರ ಗೆಲುವು ನಿಶ್ಚಿತ ಎಂದರು.