ಸರ್ಕಾರಿ ಸೌಲಭ್ಯಗಳ ಸದುಪಯೋಗಪಡಿಸಿಕೊಳ್ಳಲು ಈಶ್ವರ್ ಖಂಡ್ರೆ ಮನವಿ.. - ಕೆಪಿಸಿಸಿ ಕಾರ್ಯಾಧ್ಯಕ್ಷ
ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರ ವಿವಿಧ ಸೌಲಭ್ಯಗಳನ್ನು ನೀಡುತ್ತಿದೆ. ಅದನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಮನವಿ ಮಾಡಿದ್ದಾರೆ. ಈ ಬಗ್ಗೆ ವಿಡಿಯೋವೊಂದನ್ನ ಬಿಡುಗಡೆ ಮಾಡಿರುವ ಅವರು ತಮ್ಮ ಕಳಕಳಿ ವ್ಯಕ್ತಪಡಿಸಿದ್ದಾರೆ. ರಾಜ್ಯದ ಎಲ್ಲೆಡೆ ಇಂದಿರಾ ಕ್ಯಾಂಟೀನ್ ಮೂಲಕ ಬೆಳಗ್ಗೆ, ಮಧ್ಯಾಹ್ನ ಹಾಗೂ ಸಂಜೆ ಊಟ ಮತ್ತು ಉಪಹಾರ ವಿತರಿಸುವ ಕಾರ್ಯ ಆಗುತ್ತಿದೆ. ಉಚಿತವಾಗಿ ಸಿಗುತ್ತಿರುವ ಈ ಸೌಲಭ್ಯದ ಸದುಪಯೋಗವನ್ನು ಎಲ್ಲರೂ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.