ಕರ್ನಾಟಕ

karnataka

ETV Bharat / videos

ಜನರನ್ನು ಬೆಚ್ಚಿಬೀಳಿಸಿದ್ದ 16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ - King cobra

By

Published : Aug 26, 2020, 5:58 PM IST

ಚಿಕ್ಕಮಗಳೂರಿನಲ್ಲಿ ಬೃಹತ್ ಗಾತ್ರದ ಕಾಳಿಂಗ ಸರ್ಪವನ್ನು ಸೆರೆ ಹಿಡಿಯಲಾಗಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೆಳಗೂರಿನ ಟೀ ಫ್ಯಾಕ್ಟರಿ ಬಳಿ ಕಳೆದ 15 ದಿನಗಳಿಂದ ಸುಮಾರು 16 ಅಡಿ ಉದ್ದದ ಕಾಳಿಂಗ ಸರ್ಪ ಕಂಡುಬಂದಿತ್ತು. ಟೀ ಎಸ್ಟೇಟ್​​​​​ನಲ್ಲಿ ಕೆಲಸ ಮಾಡುವ ಕೂಲಿ ಕಾರ್ಮಿಕರಿಗೆ ಹಲವಾರು ಬಾರಿ ಕಾಣಿಸಿಕೊಂಡಿದ್ದು, ಭಯದಿಂದಲೇ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಬಳಿಕ ಉರಗ ತಜ್ಞ ಸ್ನೇಕ್​ ಆರೀಫ್​​​​ಗೆ ಮಾಹಿತಿ ನೀಡಲಾಗಿತ್ತು. ಕೂಡಲೇ ಸ್ಥಳಕ್ಕಾಗಮಿಸಿದ ಆರೀಫ್ 30 ನಿಮಿಷಗಳ ಕಾಲ ಕಾರ್ಯಾಚರಣೆ ನಡೆಸಿ ಕಾಳಿಂಗ ಸರ್ಪ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ಚಾರ್ಮಾಡಿ ಘಾಟ್​​ ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.

ABOUT THE AUTHOR

...view details