ಶೋಷಿತ ವರ್ಗಗಳಿಗೆ ಬಿಜೆಪಿಯಲ್ಲಿ ಜಾಗವಿದೆ: ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಅಭಿಮತ - ಬಿಜೆಪಿ ಸೇರಿದ ಕೊಳ್ಳೆಗಾಲ ಶಾಸಕ
ಬೆಂಗಳೂರಿನಲ್ಲಿರುವ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಕೇಸರಿ ಪಕ್ಷ ಸೇರ್ಪಡೆಯಾದ ಕೊಳ್ಳೇಗಾಲ ಶಾಸಕ ಎನ್ ಮಹೇಶ್, ತಾನು ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ ಎಂದು ತಿಳಿಸಿದ್ದಾರೆ. 'ಈಟಿವಿ ಭಾರತ'ದೊಂದಿಗೆ ಕಿರು ಸಂದರ್ಶನದಲ್ಲಿ ಮಾತನಾಡಿದ ಅವರು, ನಮ್ಮ ಶೋಷಿತ ವರ್ಗಕ್ಕೆ ನ್ಯಾಯ ಒದಗಿಸಲು ಬಿಜೆಪಿಯಲ್ಲಿ ಅವಕಾಶ ಇದೆ ಎಂದು ಅನಿಸಿದೆ. ಹಾಗಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ. ಸಂಘಟನೆ ವಿಚಾರವಾಗಿ ನನ್ನನ್ನು ಹೇಗೆ ಬಳಸಿಕೊಳ್ಳಬೇಕು ಎಂಬುದು ಪಕ್ಷಕ್ಕೆ ಬಿಟ್ಟಿದ್ದು ಎಂದು ಇದೇ ವೇಳೆ ಹೇಳಿದ್ದಾರೆ.