ಕೊರೊನಾ ಭೀತಿ: ಕೊಪ್ಪಳದ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳ ಸ್ಥಾಪನೆಗೆ ಜಿಲ್ಲಾಡಳಿತ ಸಜ್ಜು
ಕೊಪ್ಪಳ: ಕೊರೊನಾ ವೈರಸ್ ಹರಡುವ ಭೀತಿ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳ ಜಿಲ್ಲಾಡಳಿತ ಜಿಲ್ಲೆಯ ಗಡಿ ಭಾಗಗಳಲ್ಲಿ ಚೆಕ್ ಪೋಸ್ಟ್ಗಳನ್ನು ಸ್ಥಾಪಿಸುತ್ತಿದೆ. ಒಟ್ಟು 11 ಕಡೆ ಚೆಕ್ ಪೋಸ್ಟ್ಗಳು ಇರಲಿದ್ದು, ದಿನದ 24 ಗಂಟೆಯೂ ಕಾರ್ಯ ನಿರ್ವಹಿಸಲಿವೆ. ಈ ಚೆಕ್ ಪೋಸ್ಟ್ಗಳಲ್ಲಿ ಕಂದಾಯ, ಆರೋಗ್ಯ, ಗ್ರಾಮ ಪಂಚಾಯ್ತಿ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿ ದಿನದಲ್ಲಿ ಮೂರು ಪಾಳೆಯದಂತೆ ಕೆಲಸ ಮಾಡಲಿದ್ದಾರೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.