ಶಾಂತವಾದ ಕೃಷ್ಣೆ: ಚಿಕ್ಕೋಡಿ ಉಪವಿಭಾಗದ ಎಲ್ಲ ಸೇತುವೆ ಸಂಚಾರಕ್ಕೆ ಮುಕ್ತ - ಚಿಕ್ಕೋಡಿ ಸುದ್ದಿ
ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಮಳೆಯ ಪ್ರಮಾಣ ತಗ್ಗಿದ ಹಿನ್ನೆಲೆ ವೇದಗಂಗಾ, ದೂಧಗಂಗಾ ಮತ್ತು ಕೃಷ್ಣಾ ನದಿಗಳಿಗೆ ಹರಿದು ಬರುವ ನೀರಿನ ಪ್ರಮಾಣ ಕಡಿಮೆಯಾಗಿದೆ. ವೇದಗಂಗಾ ಮತ್ತು ದೂಧಗಂಗಾ ನದಿಗಳ ಮೂಲಕ 11,088 ಕ್ಯೂಸೆಕ್ ಮತ್ತು ರಾಜಾಪುರ ಬ್ಯಾರೇಜ್ ಮೂಲಕ 53,103 ಕ್ಯೂಸೆಕ್ ಸೇರಿ ಒಟ್ಟು 64,191 ಕ್ಯೂಸೆಕ್ ನೀರು ಕೃಷ್ಣಾ ನದಿಗೆ ಹರಿದು ಬರುತ್ತಿದೆ. ಕೃಷ್ಣಾ ನದಿಯ ಒಳ ಹರಿವಿನಲ್ಲಿ ಕಡಿಮೆಯಾಗಿದ್ದು, ನದಿ ತೀರದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಚಿಕ್ಕೋಡಿ ಉಪವಿಭಾಗದ ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿವೆ.