ಹಿಂದಿ ದಿವಸ್ ಆಚರಣೆ ಖಂಡಿಸಿ ಗದಗದಲ್ಲಿ ಕರವೇ ಪ್ರತಿಭಟನೆ - KRV protest in gadag
ಕೇಂದ್ರ ಸರ್ಕಾರದ ಹಿಂದಿ ದಿವಸ್ ಆಚರಣೆ ಖಂಡಿಸಿ ಗದಗ ನಗರದಲ್ಲಿ ಕರವೇ ನಾರಾಯಾಣಗೌಡ ಬಣದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮಾ ಗಾಂಧಿ ವೃತ್ತದಲ್ಲಿ ಹಿಂದಿ ದಿವಸ್ಗೆ ವಿರುದ್ಧವಾಗಿ ಕಪ್ಪು ದಿನಾಚರಣೆ ಆಚರಿಸುವ ಮೂಲಕ ವಿನೂತನವಾಗಿ ಪ್ರತಿಭಟನೆ ಮಾಡಿದ ಕರವೇ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಕೇಂದ್ರ ಸರ್ಕಾರ ಈ ನಿರ್ಧಾರ ಕೈ ಬಿಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡೋದಾಗಿ ಎಚ್ಚರಿಕೆ ನೀಡಿದರು.