ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಮತದಾನ ಮಾಡುವ ಮತಗಟ್ಟೆ ಸುತ್ತ ಬಿಗಿ ಭದ್ರತೆ.. - Congress candidate Kusuma voting booth
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಮತದಾನ ಮಾಡಲಿರುವ ನಾಗರಬಾವಿಯ ಮಲ್ಲತ್ತಹಳ್ಳಿಯ ಮುಂಭಾಗ ಸಾಕಷ್ಟು ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಿಸರ್ವ್ ಪೊಲೀಸ್ ಪಡೆಯನ್ನು ಕೂಡ ನಿಯೋಜಿಸುವ ಜೊತೆಗೆ ಅರೆಸೇನಾಪಡೆ ಸಿಬ್ಬಂದಿ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜನೆಗೊಂಡಿದ್ದು, ಶಾಂತಿಯುತ ಮತದಾನಕ್ಕೆ ಅಗತ್ಯವಿರುವ ಎಲ್ಲಾ ರೀತಿಯ ಕ್ರಮವನ್ನು ಕೈಗೊಳ್ಳಲಾಗಿದೆ. ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಎಲ್ಲೆಡೆ ಶಾಂತಿಯುತ ಮತದಾನ ನಡೆಸಲು ಪೊಲೀಸ್ ಇಲಾಖೆ ಸಜ್ಜಾಗಿದ್ದು, ಮತಗಟ್ಟೆಯಲ್ಲಿ ಕೂಡ ಸಾಕಷ್ಟು ಭದ್ರತಾ ಕ್ರಮ ಕೈಗೊಂಡಿದ್ದಾರೆ. ಈ ಕುರಿತು ನಮ್ಮ ಈಟಿವಿ ಭಾರತ ಪ್ರತಿನಿಧಿ ನೀಡಿರುವ ಗ್ರೌಂಡ್ ರಿಪೋರ್ಟ್ ಇಲ್ಲಿದೆ..
TAGGED:
RR nagara election 2020