ಮತ್ತೆ ಎದುರಾಗುವುದೇ ಭೂ ಕುಸಿತ? ಆತಂಕದಲ್ಲಿ ಕೊಡವನಾಡಿನ ಮೊಣ್ಣಂಗೇರಿ - ಕೊಡಗಿನಲ್ಲಿ ಪ್ರವಾಹ
ಎರಡು ವರ್ಷಗಳ ಹಿಂದೆ ಕೊಡಗು ಜಿಲ್ಲೆಯಲ್ಲಿ ಸಂಭವಿಸಿದ್ದ ಭೀಕರ ಭೂ ಕುಸಿತದ ಆತಂಕ ಜನರ ಮನಸ್ಸಿನಿಂದ ಇನ್ನೂ ದೂರವಾಗಿಲ್ಲ. ಈ ನಡುವೆ ಬಂದ ಗಂಡಾಂತರ ಮುಗಿದು ಹೋಯಿತೆಂದು ಜನರು ಕೃಷಿ ಮಾಡುತ್ತಾ ತಮ್ಮ ಬದುಕನ್ನು ಮತ್ತೆ ಕಟ್ಟಿಕೊಳ್ಳಲು ಮುಂದಾಗಿದ್ದರು. ಆದರೆ ಎರಡು ವರ್ಷಗಳ ಹಿಂದೆ ಭೂಕುಸಿತ ಸಂಭವಿಸಿದ್ದ ಸ್ಥಳಗಳಲ್ಲಿ ಮತ್ತೆ ನಡುಕ ಶುರುವಾಗಿದೆ.