ಕರ್ನಾಟಕ

karnataka

ETV Bharat / videos

ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿ ಟೈರ್ ಬ್ಲಾಸ್ಟ್​​​: ಸುಟ್ಟು ಕರಕಲಾದ ಲಾರಿ

By

Published : May 5, 2020, 2:26 PM IST

ಚಿತ್ರದುರ್ಗ: ಮೆಕ್ಕೆಜೋಳ ಸಾಗಿಸುತ್ತಿದ್ದ ಲಾರಿಯ ಟೈರ್ ಬ್ಲಾಸ್ಟ್​ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ, ಲಾರಿ ಸುಟ್ಟು ಕರಕಲಾಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಗುಯಿಲಾಳು ಗ್ರಾಮದಲ್ಲಿ ನಡೆದಿದೆ. ಬೆಂಕಿ ಹೊತ್ತಿ ಉರಿದ ಭಯಾನಕ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಾರೀ ದೊಡ್ಡ ಅನಾಹುತ ತಪ್ಪಿದೆ. ಲಾರಿಯಲ್ಲಿದ್ದ ಚಾಲಕ ಹಾಗೂ ಕ್ಲೀನರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಘಟನಾ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಐಮಂಗಲ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ABOUT THE AUTHOR

...view details