ಪೊಲೀಸರ ಹಲ್ಲೆ ಖಂಡಿಸಿ ವಕೀಲರಿಂದ ಪ್ರತಿಭಟನೆ - ಪ್ರಧಾನ ಮಂತ್ರಿಗಳಿಗೆ ತಹಶಿಲ್ದಾರ ಮೂಲಕ ಮನವಿ
ದೆಹಲಿಯಲ್ಲಿ ವಕೀಲರ ಮೇಲೆ ಪೊಲೀಸರು ನಡೆಸಿದ್ದಾರೆ ಎನ್ನಲಾದ ಹಲ್ಲೆ ಖಂಡಿಸಿ, ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ಬಾರ್ ಅಸೋಸಿಯೇಷನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ತಾಲೂಕಿನ ತಹಶಿಲ್ದಾರ ಕಚೇರಿ ಎದುರು ಪೊಲೀಸರ ವಿರುದ್ಧ ಘೋಷಣೆ ಹಾಕಿ ಪ್ರತಿಭಟನೆ ನಡೆಸಿ, ವಿನಾಕಾರಣ ಪೊಲೀಸರು ವಕೀಲರ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಬಗ್ಗೆ ಸೂಕ್ತ ತನಿಖೆ ನಡೆಸಿ,ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು, ಹಲ್ಲೆ ಮಾಡಿರುವ ಪೊಲೀಸರಿಗೆ ಅಮಾನತು ಮಾಡಬೇಕು ಎಂದು ಪ್ರಧಾನಿಯವರಿಗೆ ತಹಶಿಲ್ದಾರ ಮೂಲಕ ಮನವಿ ಸಲ್ಲಿಸಿದರು.