ಕರ್ನಾಟಕ

karnataka

ETV Bharat / videos

ವೈಯಕ್ತಿಕ ಹಿತಾಸಕ್ತಿಗಾಗಿ ಪಕ್ಷ ಬಿಟ್ಟು, ಕಾಂಗ್ರೆಸ್ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಶಾಸಕ ಭೀಮಾ ನಾಯ್ಕ - ಶಾಸಕ ಭೀಮಾನಾಯ್ಕ ಸುದ್ದಿ

By

Published : Feb 14, 2021, 9:15 PM IST

ದಾವಣಗೆರೆ: ಸಮ್ಮಿಶ್ರ ಸರ್ಕಾರದಿಂದ ಹೊರ ಬಂದಿದ್ದು ಅವರ ವೈಯಕ್ತಿಕ ಹಿತಾಸಕ್ತಿಗಾಗಿ. ಸಚಿವರಾಗಬೇಕು‌ ಎಂದು ಪಕ್ಷ ಬಿಟ್ಟು ಬಿಜೆಪಿ ಸೇರಿ ಈಗ ಕಾಂಗ್ರೆಸ್ ಪಕ್ಷದ ವಿರುದ್ಧ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿಕೆಗೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ ತಿರುಗೇಟು ನೀಡಿದರು. ದಾವಣಗೆರೆಯ ನ್ಯಾಮತಿ ತಾಲೂಕಿನ ಸೂರಗೊಂಡನಕೊಪ್ಪದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನಿಂದ ಐದು ಜನ ಶಾಸಕರು ಹೊರ ಬರ್ತಾರೆ ಅಂತ ರಮೇಶ್ ಜಾರಕಿಹೊಳಿ ಹೇಳುತ್ತಿದ್ದಾರೆ. ಹೊರ ಬರುವವರ ಹೆಸರನ್ನು ಬಹಿರಂಗಪಡಿಸಲಿ. ಸಿದ್ದರಾಮಯ್ಯ ಇರೋವರೆಗೂ ನಾವು ಕಾಂಗ್ರೆಸ್ ಬಿಡಲ್ಲ. ಕಾಂಗ್ರೆಸ್​ನಲ್ಲೇ ಇದ್ದು ಕೆಲಸ ಮಾಡುತ್ತೇವೆ. ನಾವು ಕಾಂಗ್ರೆಸ್ ಪಕ್ಷಕ್ಕೆ ದ್ರೋಹ ಮಾಡುವ ಕೆಲಸ ಮಾಡಲ್ಲ. ಪಕ್ಷಕ್ಕೆ ದ್ರೋಹ ಮಾಡಿದರೆ ತಾಯಿಗೆ ದ್ರೋಹ ಮಾಡಿದಂತೆ ಎಂದು ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಹೇಳಿದ್ರು.

ABOUT THE AUTHOR

...view details