ಕೆಆರ್‌ಎಸ್ ಬಳಿ ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಜನ! - Leopard captured in Mandya
ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಬೃಂದಾವನದಲ್ಲಿ ಸ್ಥಳೀಯರು, ಪ್ರವಾಸಿಗರನ್ನು ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಕೆಆರ್‌ಎಸ್ ಅಣೆಕಟ್ಟೆಯ ಮುಖ್ಯದ್ವಾರದಲ್ಲಿ ಹಾಗೂ ಬೃಂದಾವನ ಗಾರ್ಡನ್‌ನಲ್ಲಿ ಕಳೆದ ಹಲವು ದಿನಗಳಿಂದ ಚಿರತೆಯೊಂದು ಪದೇ ಪದೆ ಕಾಣಿಸಿಕೊಂಡಿತ್ತು. ಕಳೆದ ಶುಕ್ರವಾರ ಚಿರತೆ ಓಡಾಡುವ ದೃಶ್ಯ ಇಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿತ್ತು. ಹೀಗಾಗಿ ಅರಣ್ಯ ಇಲಾಖೆಯ ಅಧಿಕಾರಿಗಳು ಕೆಆರ್‌ಎಸ್ ಅಣೆಕಟ್ಟಿನ ಮುಖ್ಯದ್ವಾರದ ಬಳಿ ಬೋನ್ ಇರಿಸಿದ್ದರು. ಇದೀಗ ಚಿರತೆ ಬೋನಿಗೆ ಬಿದ್ದಿದ್ದು, ಸಾರ್ವಜನಿಕರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.