ತುಮಕೂರು: ಜನ-ಜಾರುಗಳ ಮೇಲೆ ದಾಳಿ ನಡೆಸಿದ್ದ ಚಿರತೆ ಕೊನೆಗೂ ಬೋನಿಗೆ - ನಾಗೋಲಿ ಗ್ರಾಮದಲ್ಲಿ ಚಿರತೆ ಸೆರೆ ನ್ಯೂಸ್
ತುಮಕೂರು: ಅನೇಕ ದಿನಗಳಿಂದ ಜನ-ಜಾನುವಾರುಗಳ ಮೇಲೆ ದಾಳಿ ನಡೆಸಿ ಭೀತಿ ಉಂಟು ಮಾಡಿದ್ದ ಚಿರತೆ ತಾಲೂಕಿನ ನಾಗೋಲಿ ಗ್ರಾಮದಲ್ಲಿ ಬೋನಿಗೆ ಬಿದ್ದಿದೆ. ಸಾರ್ವಜನಿಕರ ಆಗ್ರಹದ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯಲು ಬೋನನ್ನು ಇರಿಸಿದ್ದರು. ಇದೀಗ ಸುಮಾರು ನಾಲ್ಕರಿಂದ ಐದು ವರ್ಷ ವಯಸ್ಸಿನ ಹೆಣ್ಣು ಚಿರತೆಯು ಸೆರೆಯಾಗಿದೆ. ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದು ಸ್ಥಳಾಂತರಿಸಲು ಮುಂದಾಗಿದ್ದಾರೆ.