ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಚಿರತೆ.. ನಿಟ್ಟುಸಿರು ಬಿಟ್ಟ ಜನತೆ - ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿಗೆ ಬಿದ್ದ ಚಿರತೆ
ಮೈಸೂರು: ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಹಂಪಾಪುರ ಹೋಬಳಿಯ ಬಿ.ಬಿ.ಸರಗೂರು ಗ್ರಾಮದಲ್ಲಿ ಜಾನುವಾರಗಳ ಮೇಲೆ ದಾಳಿ ಮಾಡುತ್ತಾ ಗ್ರಾಮಸ್ಥರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ. ಹಲವು ದಿನಗಳಿಂದ ಗ್ರಾಮದ ಹೊರವಲಯದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಜಾನುವಾರುಗಳನ್ನು ತಿಂದು ತೇಗುತ್ತಿತ್ತು. ಇದರಿಂದ ಸಂಜೆಯಾಗುತ್ತಿದಂತೆ ಗ್ರಾಮಸ್ಥರು ಜಮೀನುಗಳ ಕಡೆ ಹೋಗಲು ಭಯಪಡುತ್ತಿದ್ದರು. ಅಲ್ಲದೇ ಚಿರತೆ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು. ಅರಣ್ಯ ಇಲಾಖೆಯವರು ಗ್ರಾಮದ ತಿಮ್ಮಚಾರಿ ಎಂಬುವವರ ಜಮೀನಿನಲ್ಲಿ ಬೋನು ಇಟ್ಟಿದ್ದರು. ಇದೀಗ ಈ ಬೋನಿಗೆ ಹೆಣ್ಣು ಚಿರತೆ ಬಿದ್ದಿದೆ.