ಬೋನಿಗೆ ಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - ಅರಣ್ಯ ಇಲಾಖೆ ಅಧಿಕಾರಿಗಳು
ಹಾಸನ: ಕಳೆದ ಹಲವು ದಿನಗಳಿಂದ ಗ್ರಾಮದಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯೊಂದು ಬೋನಿಗೆ ಬಿದ್ದಿದ್ದು, ಜನರು ನಿಟ್ಟುಸಿರು ಬಿಡುವಂತಾಗಿದೆ. ತಾಲೂಕಿನ ಹಳೆಕೊಪ್ಪಲು ಗ್ರಾಮದ ಸುತ್ತಮುತ್ತ ಹಲವು ದಿನಗಳಿಂದ ಉಪಟಳ ನೀಡಿ ಕರು, ಹಸುಗಳು ಹಾಗೂ ನಾಯಿಗಳನ್ನು ತಿಂದು ಹಾಕಿತ್ತು. ಇದರಿಂದ ಭಯಭೀತರಾಗಿದ್ದ ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಕೆಲ ದಿನಗಳ ಹಿಂದೆ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆಯನ್ನು ಸೆರೆ ಹಿಡಿಯಲು ಬೋನು ಅಳವಡಿಸಿದ್ದರು. ಮಂಗಳವಾರ ರಾತ್ರಿ ಕೂಡ ಆಹಾರ ಅರಸಿ ಬಂದ ಚಿರತೆ ಬೋನಿಗೆ ಬಿದ್ದಿದೆ. ಕಳೆದ ತಿಂಗಳ ಹಿಂದೆಯಷ್ಟೇ ಇಲ್ಲಿ ಒಂದು ಚಿರತೆಯನ್ನು ಇದೇ ರೀತಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದರು.